Advertise

25 July 2022

26.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಕಡಿಮೆ ಇರುವ ಕಾರಣ ಮೋಡವಿದ್ದರೂ ಮಳೆ ಪ್ರಮಾಣ ಕಡಿಮೆ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ನಗರ ಹಾಗೂ ಗ್ರಾಮಾಂತರ, ಗುಬ್ಬಿ ಸುತ್ತಮುತ್ತ, ಬಳ್ಳಾರಿ ಸುತ್ತಮುತ್ತ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಗುಜರಾತ್ - ಪಾಕಿಸ್ತಾನ ಗಡಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹೆಚ್ಚಿನ ಮೋಡಗಳು ಆ ಕಡೆ ಸೆಳೆಯುತ್ತಿವೆ. 
ದಕ್ಷಿಣ ಸುಮಾತ್ರ ಕಡಲಲ್ಲಿ ಈಗಾಗಲೇ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು. ಮುಂಗಾರು ಮಾರುತಗಳಿಗೆ ತಡೆಯಾಗುವ ಸಾಧ್ಯತೆ ಇದೆ. 

No comments:

Post a Comment

30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಅರಬ್ಬಿ ಸಮುದ್ರದ ಕಡೆಯಿಂ...