Advertise

26 July 2022

27.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಒಂದೊಂದು ಮಳೆಯ ಸಾಧ್ಯತೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಾಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಸುಮಾತ್ರ ತೀರದ ಸಮೀಪ, ಹಿಂದೂಮಹಾಸಾಗರದಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತದ ಪರಿಣಾಮದಿಂದ ಅರಬ್ಬಿ ಸಮುದ್ರದ ಮುಂಗಾರು ಮಾರುತಗಳು ದುರ್ಬಲಗೊಂಡು ಆ ಕಡೆ ಸೆಳೆಯಲ್ಪಡುತ್ತಿವೆ. 
ಇದರಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...