Advertise

28 July 2022

29.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.07.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಮೂಡಿಗೆರೆ, ಶಿೃಂಗೇರಿ, ಹೊಸನಗರ, ಸಾಗರ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿಯ ಕಾರ್ಕಳ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ತುಮಕೂರಿನ ಕೆಲವು ಭಾಗಗಳಲ್ಲಿ, ಚಾಮರಾಜನಗರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರ್ಗಿ ಹಾಗೂ ಬೀದರ್  ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಆಗಷ್ಟ್ 3ನೇ ತಾರೀಕಿನಿಂದ ದಕ್ಷಿಣ ಸುಮಾತ್ರ ತೀರದ ವಾಯುಭಾರ ಕುಸಿತವು ಶಿಥಿಲಗೊಳ್ಳುವ ಲಕ್ಷಣಗಳಿದ್ದು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಪುನಃ ಆರಂಭಗೊಳ್ಳುವ ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...