Advertise

29 July 2022

30.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ತುಮಕೂರಿನ ಒಂದೆರಡು ಕಡೆ, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಇವತ್ತು ಉಂಟಾಗಿರುವ ಸಣ್ಣ ಪ್ರಮಾಣದ ವಾಯುನಿಮ್ನತೆಯಿಂದಾಗಿ ಹಿಂಗಾರು ರೀತಿಯ ಮಳೆಗೆ ಮತ್ತಷ್ಟು ಬಲ ಬಂದಂತಾಗಿದೆ. 
ದಕ್ಷಿಣ ಸುಮಾತ್ರ ತೀರದ ಸಮೀಪ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದೆ. ಈಗಿನ ಪ್ರಕಾರ ಆಗಷ್ಟ್ 3ರಂದು ಶ್ರೀಲಂಕಾ ನೇರಕ್ಕೆ (ನಕ್ಷೆಯಲ್ಲಿ ತೋರಿಸಿದಂತೆ) ತಲಪುವ ಸಾಧ್ಯತೆ ಇದೆ. ಹೀಗಾದಲ್ಲಿ ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ. ಆಗಷ್ಟ್ 3ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯೂ ಇದೆ. 


No comments:

Post a Comment

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...