Advertise

30 July 2022

31.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


31.07.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ಕೋಲಾರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಒಟ್ಟಿನಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಸುಮಾತ್ರ ಸಮೀಪದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಆಗಷ್ಟ್ 3ನೇ ತಾರೀಕಿನಂದು ಹಿಂದೂಮಹಾಸಾಗರದಲ್ಲಿ ಶ್ರೀಲಂಕಾ ನೇರಕ್ಕೆ ಬರುವ ಸಾಧ್ಯತೆ ಇದೆ. ಇದರಿಂದ ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ. 
ಈಗಿನಂತೆ ಜುಲೈ 31ರಿಂದ ಆಗಷ್ಟ್ 6ನೇ ತಾರೀಕಿನವರೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಆಮೇಲೆ ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಕರಾವಳಿ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...