Advertise

31 August 2022

01.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಚಾಮರಾಜನಗರ, ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶಿೃಂಗೇರಿ, ಕೊಪ್ಪ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ  ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆ  ಹೆಚ್ಚಿರುವ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು(ಒಂದೆರಡು ಕಡೆ)    ದಾವಣಗೆರೆ, ಚಿತ್ರದುರ್ಗ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಈಗಿನ ಈ ಗುಡುಗು ಸಹಿತ ಮಳೆಯ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. 



30 August 2022

31.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಭಾಗಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲಗೊಂಡು ಗಾಳಿಯ ದಿಕ್ಕು ಬದಲಾಗಿದ್ದರಿಂದ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗಬಹುದು. ಆದರೂ ಮೈಸೂರು , ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ,  ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 
ರಾಯಚೂರು ಬಿಸಿಲು, ಮೋಡ ಮಾತ್ರ ಇರಬಹುದು. 
ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಪಾವಗಡ, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾದರೂ  ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

29 August 2022

30.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬೆಳಿಗ್ಗೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆ ಇದ್ದರೆ ಮಧ್ಯಾಹ್ನ ಮೇಲೆ ಭಾರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು - ತಮಿಳುನಾಡು ಗಡಿಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ, ಚಾಮರಾಜನಗರ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೋಡಗಳು ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕುಕ್ಕೆಸುಬ್ರಹ್ಮಣ್ಯ ಹಾಗೂ ಮಡಿಕೇರಿ ಘಾಟಿಯ ಕೆಳಗಿನ ದಕ್ಷಿಣ ಕನ್ನಡ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಬಹುದು. (ನಿನ್ನೆಯ ಜಲಸ್ಫೋಟದ ಕಾರಣವೂ ಇದಾಗಿರಬಹುದು) 
ರಾಜ್ಯದ ಈಗಿನ ಈ ವಾತಾವರಣವು ಇನ್ನೂ ಒಂದು ವಾರ ಕಾಲ ಮುಂದುವರಿಯುವ ಸಾಧ್ಯತೆ ಇದೆ. 



28 August 2022

29.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಭಾಗಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾರಿ ಮಳೆಯ ಸಾಧ್ಯತೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಈ ವಾತಾವರಣ ಮುಂದಿನ ಒಂದು ವಾರದ ವರೆಗೆ ಮುಂದುವರಿಯಲಿದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ 
 



27 August 2022

28.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಉಳಿದ ದ. ಕ. ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ ಭಾರಿ ಮಳೆಯ ಮುನ್ಸೂಚನೆ ಇದೆ. 
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ ಬಾಗಲಕೋಟೆ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ಇವತ್ತು ಹಾಗೂ ನಾಳೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಆಗಷ್ಟ್ 29 ರಿಂದ ಸೆಪ್ಟೆಂಬರ್ 3ರ ತನಕ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 



26 August 2022

27.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27. 08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 
ಉತ್ತರ ಕನ್ನಡ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. 

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಆಗಷ್ಟ್ 27ರಿಂದ ಮಳೆ ಸ್ವಲ್ಪ ಕಡಿಮೆ ಆಗಬಹುದು. ಆಗಷ್ಟ್ 30ರಿಂದ ಮತ್ತೆ ಬಿರುಸುಗೊಳ್ಳುವ ಮಳೆಯು ಸೆಪ್ಟೆಂಬರ್ 6 ಅಥವಾ 7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ. 


25 August 2022

26.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆ ಕಡಿಮೆಯಾಗಿ ಮೋಡದ ವಾತಾವರಣದ ಇದೆ. ಆದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ಮೇಲೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. 
ಬಂಗಾಳಕೊಲ್ಲಿ ಶಾಂತವಾಗಿರುವುದರಿಂದ ಸಧ್ಯಕ್ಕೆ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕಾರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಸೆಪ್ಟೆಂಬರ್ 1ರ ವರೆಗೆ ಅಲ್ಲಲ್ಲಿ ದಿನಕ್ಕೆ ಒಂದೆರಡು ಮಳೆಯಂತೆ ಮುಂದುವರಿಯುವ ಮುನ್ಸೂಚನೆ ಇದೆ. 
ಆಮೇಲೆ ಮತ್ತೂ ಕಡಿಮೆಯಾಗಬಹುದು. 

ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ


24 August 2022

25.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


25.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ,  ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಆಗಷ್ಟ್ 25ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು 
ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮತ್ತು ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 


23 August 2022

24.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಇವತ್ತು ಮತ್ತೆ ನಾಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಮಂಡ್ಯ,  ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ  ಜಿಲ್ಲೆಗಳ ಅಲ್ಲಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತವು ರಾಜಸ್ಥಾನ ಪ್ರವೇಶಿಸುತ್ತಿದ್ದು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಆಗಷ್ಟ್ 25ರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಯಾಗುವ ಮುನ್ಸೂಚನೆ ಇದ್ದು ನಂತರ ಮುಂದಿನ 10 ದಿನಗಳವರೆಗೂ ರಾಜ್ಯದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


22 August 2022

23.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆ ಲಕ್ಷಣಗಳಿವೆ. 

ಮೈಸೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ವಾಯುಭಾರ ಕುಸಿತವು ಮಧ್ಯಪ್ರದೇಶದಲ್ಲಿ ಬೀಡುಬಿಟ್ಟಿದ್ದು. ಭೋಪಾಲ್ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಸಂಭವ ಇದೆ. 
ಈಗನ ಪ್ರಕಾರ ನಾಳೆ ಅಂದರೆ ಆಗಸ್ಟ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 




21 August 2022

22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ ಸ್ವಲ್ಪ ಮಳೆ ಕಡಿಮೆ ಇದ್ದರೆ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

 ತುಮಕೂರು, ಚಿತ್ರದುರ್ಗ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉತ್ತರ ಭಾರತದಲ್ಲಿ ಉಂಟಾಗಿರುವ 2 ವಾಯುಭಾರ ಕುಸಿತವು ಬಹಳಷ್ಟು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಮಧ್ಯ ಭಾರತದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. 

ಆಗಷ್ಟ್ 22 ರಿಂದ 24ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. 
25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಸಾಧಾರಣ ಮಳೆಯ ಸಾಧ್ಯತೆ ಇದೆ. 

20 August 2022

21.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ  ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಮತ್ತು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ಬೆಂಗಳೂರಿನ ಪೂರ್ವ ಭಾಗ ಮತ್ತು ಕೋಲಾರ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಹಾಗೂ ಛತ್ತೀಸಘಡ ಗಡಿಭಾಗಕ್ಕೆ ತಲುಪಿದ್ದು ಇವತ್ತು, ನಾಳೆಯಲ್ಲಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ ಇದೆ. 
ಈಗನ ಪರಿಸ್ಥಿತಿಯಂತೆ ಆಗಷ್ಟ್ 21ರಿಂದ ಕರಾವಳಿ ಭಾಗಗಳಲ್ಲಿ ಮತ್ತು 26ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ. 


19 August 2022

20.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಆಗುಂಬೆ, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. 


ಪಶ್ಚಿಮ ಬಂಗಾಳ ವಾಯುಭಾರ ಕುಸಿತವು ತೀವ್ರತೆ ಪಡೆದಿದ್ದು,  ಇವತ್ತು ರಾತ್ರಿ ಪಶ್ಚಿಮ ಬಂಗಾಳದ ಮೂಲಕ ಭೂಮಿಗೆ ಪ್ರವೇಶಿಸಲಿದ್ದು ಪಶ್ಚಿಮಾಭಿಮುಖವಾಗಿ ರಾಜಸ್ಥಾನದವರೆಗೂ ಚಲಿಸಲಿದೆ. 
ಆಗಷ್ಟ್ 21ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 
ಆಗಷ್ಟ್ 23ರಿಂದ ದಕ್ಷಿಣ ಕರ್ನಾಟಕ ಮತ್ತು 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

18 August 2022

19.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


19.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಹಾಸನ, ಆಗುಂಬೆ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ರಾಜಸ್ಥಾನದ ವಾಯುಭಾರ ಕುಸಿತವು ಪಾಕಿಸ್ಥಾನಕ್ಕೆ ಪ್ರವೇಶಿಸುತ್ತಿದೆ. ಈ ಮಧ್ಯೆ ಬಾಂಗ್ಲಾದೇಶದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು ಪರಿಣಾಮವಾಗಿ ಆಗಷ್ಟ್ಕ 20ರಿಂದ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಒಂದು ವಾರದ ಕಾಲ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. ಆಗಷ್ಟ್ 25 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಲಕ್ಷಣಗಳಿವೆ. 

17 August 2022

18.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
 
ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಧ್ಯಾಹ್ನ ಮೇಲೆ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ ಜಿಲ್ಲಾ ಭಾಗಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಆರಂಭವಾಗಿದ್ದ ವಾಯುಭಾರ ಕುಸಿತವು ಭೂಮಿಯ ಮೇಲೆ ಚಲಿಸಿ ಈಗ ರಾಜಸ್ಥಾನ, ಗುಜರಾತ್ - ಪಾಕಿಸ್ತಾನ ಗಡಿವರೆಗೆ ತಲುಪಿದೆ. ಮುಂದೆ ಪಾಕಿಸ್ತಾನಕ್ಕೆ ಪ್ರವೇಶಿಸಲಿದೆ. 

ಈಗನ ಮುನ್ಸೂಚನೆಯಂತೆ ಆಗಷ್ಟ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ( ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,  ಚಾಮರಾಜನಗರ)  ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಆಗಷ್ಟ್ 20ರಿಂದ ಕರ್ನಾಟಕದ ಕರಾವಳಿಯಾದ್ಯಂತ ಮುಂಗಾರು ಮತ್ತೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 25ರಿಂದ ರಾಜ್ಯದ ದಕ್ಷಿಣದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಲಕ್ಷಣಗಳಿವೆ. 


16 August 2022

17.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಗುಂಡ್ಲುಪೇಟೆ, ಉತ್ತರ ಕನ್ನಡ-ಗೋವಾ ಗಡಿಭಾಗಗಳಲ್ಲಿ, ವಿಜಯಪುರ -  ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಆಗಷ್ಟ್ 17ರಿಂದ ಬೆಂಗಳೂರು, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ಎರಡು ದಿನಗಳಲ್ಲಿ ಅದೂ ಕಡಿಮೆಯಾಗವ ಲಕ್ಷಣಗಳಿವೆ. 
ಈಗಿನಂತೆ ಆಗಷ್ಟ್ 20ರಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿಯಾದ್ಯಂತ ಮತ್ತೆ ಮಳೆಯ ವಾತಾವರಣದ ಸಾಧ್ಯತೆ ಇದ್ದು ಮತ್ತೆರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಭಾಗಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

15 August 2022

16.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ, ತುಂತುರು ಮಳೆ, ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಚಾಮರಾಜನಗರದ ಗುಂಡ್ಲುಪೇಟೆ ಸುತ್ತಮುತ್ತ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿತ್ರದುರ್ಗದ ಚಿತ್ರದುರ್ಗ ಹಾಗೂ ಹೊಳಲ್ಕೆರೆ ಸುತ್ತಮುತ್ತ, ಗದಗ ಹಾಗೂ ಬಳ್ಳಾರಿ ಗಡಿಭಾಗಗಳಲ್ಲಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 



14 August 2022

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಬಿಸಿಲು ಹಾಗೂ ಘಟ್ಟದ ತಪ್ಪಲ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಡಿಶಾದ ಕರಾವಳಿಯಾದ್ಯಂತ ಅನಿರೀಕ್ಷಿತವಾಗಿ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾಗಿರುವುದರಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗನ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯ ವಾತಾವರಣಕ್ಕೂ ಇದೇ ಕಾರಣ. 
ಪಶ್ಚಿಮ ಬಂಗಾಳ ವಾಯುಭಾರ ಕುಸಿತ ಆಗಷ್ಟ್ 16ರಂದು ರಾಜಸ್ಥಾನ ತಲುವ ಸಾಧ್ಯತೆ ಇದೆ. 

13 August 2022

14.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


14.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಆಗಷ್ಟ್ 14ರಿಂದ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಉತ್ತಮ ವಾತಾವರಣ ನಿರ್ಮಾಣವಾಗುವ ಲಕ್ಷಣಗಳಿವೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲೂ ಬಿಸಿಲು, ಮೋಡ, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಷ್ಟ್ 14ರಂದು ಪಶ್ಚಿಮ ಬಂಗಾಳ ಹಾಗೂ ಒಡಿಶಾದ ಗಡಿಭಾಗಗಳ ಮೂಲಕ ಭೂಮಿಗೆ ಪ್ರವೇಶಿಸುವ ಸಾಧ್ಯತೆ ಇದೆ. ಅಷ್ಟೇನು ಪ್ರಭಲವಲ್ಲದ ವಾಯುಭಾರ ಕುಸಿತವು ಶಿಥಿಲಗೊಳ್ಳದೆ ಮಧ್ಯಪ್ರದೇಶ, ರಾಜಸ್ಥಾನದವರೆಗೂ ಪಯಣಿಸುವ ಲಕ್ಷಣಗಳಿವೆ. 

ಗುಜರಾತ್ ವಾಯುಭಾರ ಕುಸಿತವು ಪಾಕಿಸ್ಥಾನದ ಕರಾಚಿಗೆ ಇವತ್ತು, ನಾಳೆಯಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. 
ರಾಜ್ಯದಾದ್ಯಂತ ಆಗಷ್ಟ್ಮ 14ರಿಂದ ಮಳೆಯ ಪ್ರಮಾಣ ಕಡಿಮೆ ಆಗಲಿದ್ದು 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 



12 August 2022

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣದ ಮುನ್ಸೂಚನೆ ಇದೆ. ಆಗಷ್ಟ್ 13ರ ನಂತರ ಅಡಿಕೆ ತೋಟಗಳಿಗೆ ಇಡೀ ದಿನ ಔಷಧ ಸಿಂಪರಣೆಗೆ ಅವಕಾಶ ಸಿಗಬಹುದು. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಒಂದೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ರಭಸ ಕಡಿಮೆಯಾದರೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. 
ಈಗನ ಪ್ರಕಾರ ಆಗಷ್ಟ್ 17ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಗುಜರಾತ್ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಪಶ್ಚಿಮ-ಉತ್ತರಕ್ಕೆ ಚಲಿಸಿ ಪಾಕಿಸ್ತಾನಕ್ಕೆ ಅಪ್ಪಳುವ ಲಕ್ಷಣಗಳಿವೆ. 
ಆಗಷ್ಟ್ 13ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪರಿಣಾಮ ತಿಳಿಯಬೇಕಾಗಿದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...