Advertise

31 August 2022

01.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಚಾಮರಾಜನಗರ, ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶಿೃಂಗೇರಿ, ಕೊಪ್ಪ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ  ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆ  ಹೆಚ್ಚಿರುವ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು(ಒಂದೆರಡು ಕಡೆ)    ದಾವಣಗೆರೆ, ಚಿತ್ರದುರ್ಗ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಈಗಿನ ಈ ಗುಡುಗು ಸಹಿತ ಮಳೆಯ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...