02.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ನಿರೀಕ್ಷೆಯಂತೆ ಭೂಮಧ್ಯ ರೇಖೆಗಿಂತ ಕೆಳಗೆ ಶ್ರೀಲಂಕಾ ನೇರಕ್ಕೆ ವಾಯುಭಾರ ಕುಸಿತ ಉಂಟಾಗಿದ್ದರಿಂದ ಮುಂಗಾರು ಮಾರುತಗಳು ಸ್ವಲ್ಪ ಮಟ್ಟಿಗೆ ಚುರುಕುಗೊಂಡಿದೆ. ಇನ್ನೆರಡು ದಿನಗಳಲ್ಲಿ ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ.
ದಕ್ಷಿಣ ಕೇರಳ ಭಾರಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು ಸಾಮಾನ್ಯವಾಗಿದ್ದರೆ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಚಿತ್ರದುರ್ಗ ಸಾಮಾನ್ಯವಾಗಿದ್ದರೆ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
No comments:
Post a Comment