03.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಮನಗರ ಸಾಮಾನ್ಯವಾಗಿದ್ದರೆ, ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ರಾಯಚೂರು ಸಾಮಾನ್ಯವಾಗಿದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಚುರುಕುಗೊಳ್ಳುತ್ತಿದ್ದು, ಆಗಷ್ಟ್ 4ನೇ ತಾರೀಕಿನಿಂದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.
ಇವತ್ತು ಮಧ್ಯಕೇರಳ Red Alert ಇದೆ (ಮಾರ್ಕ ಮಾಡಿದ ಜಾಗ)
ಆಗಷ್ಟ್ 4, 5ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ಅಲ್ಪ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ. ಪರಿಣಾಮ ಇನ್ನಷ್ಟೇ ತಿಳಿಯಬೇಕಾಗಿದೆ.
No comments:
Post a Comment