04.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಹಗಲು ಅಲ್ಲಲ್ಲಿ ತುಂತುರು ಇದ್ದು, ಮಧ್ಯಾಹ್ನ ಮೇಲೆ, ಸಂಜೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಕೊಡಗು, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಉತ್ತರ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಸಹ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ತುಮಕೂರು ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಚುರುಕುಗೊಂಡರೂ ಭೂಮಿಯ ಕಡೆಗೆ ನುಗ್ಗಿ ಬರುತ್ತಿಲ್ಲ. ಈ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹಗಲು ಮೋಡ ಅಥವಾ ತುಂತುರು ಮಳೆ ಇದ್ದು, ಸಂಜೆಯಾಗುತ್ತಲೇ ಪೂರ್ವದ ಮೋಡ ಹಾಗೂ ಗಾಳಿಯ ಒತ್ತಡದಿಂದ ಮಳೆ ಹೆಚ್ಚಾಗುತ್ತಿದೆ. ಅದರಲ್ಲೂ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಧಾರಾಕಾರ ಸುರಿಯುತ್ತಿದೆ.
ಆಗಷ್ಟ್ 5ರಿಂದ ಮುಂಗಾರು ಸರಿಯಾಗಿ ಭೂಮಿಯ ಕಡೆ ನುಗ್ಗಿ ಬರುವುದರಿಂದ ಪೂರ್ವದ ಗುಡುಗು ಸಹಿತ ಮಳೆಯು ಹಿಂದೆ ಹೋಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಿ ಒಳನಾಡು ಭಾಗಗಳಲ್ಲಿ ಮಳೆಯ ಕಡಿಮೆಯಾಗುವ ಮುನ್ಸೂಚನೆ ಇದೆ.
No comments:
Post a Comment