07.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ, ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರಾವಳಿ ಹಾಗೂ ಮಲೆನಾಡಿನ ಈಗಿನ ಈ ವಾತಾವರಣವು ಆಗಷ್ಟ್ 13ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಈ ನಡುವೆ ನಾಳೆ ಮಧ್ಯಾಹ್ನ ಮೇಲೆ ಅಥವಾ ರಾತ್ರಿ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ತೀವ್ರ ಸ್ವರೂಪ ಪಡೆದುಕೊಂಡರೆ ಭೂಮಿ ಮೇಲೆ ಪಶ್ಚಿಮಕ್ಕೆ ಸಾಗಿ ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಸಾಧ್ಯತೆ ಇದೆ.
No comments:
Post a Comment