09.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಒಡಿಶಾ ಕರಾವಳಿ ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದ್ದು ಭೂಮಿ ಮೇಲೆ ಮಧ್ಯಪ್ರದೇಶ ತನಕ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದೇ ಸಮಯದಲ್ಲಿ ಗುಜರಾತ್ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಲಿದ್ದು, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂಬೈ ಭಾರಿ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.
ಇದರ ಪರಿಣಾಮದಿಂದ ಆಗಷ್ಟ್ 12ರ ನಂತರ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸೂಚನೆ ಇದೆ.
No comments:
Post a Comment