Advertise

09 August 2022

10.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಸ್ವಲ್ಪ ಮಳೆ ಹೆಚ್ಚಿರಬಹುದು. 
ಘಟ್ಟದ ತಪ್ಪಲಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರ್ಗಿ ಹಾಗೂ ಬೀದರ್  ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

ಮೈಸೂರು, ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಆಗಷ್ಟ್ 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮಧ್ಯಪ್ರದೇಶ ತಲುಪಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಅಷ್ಟೇನು ಪ್ರಭಾವಿತವಾಗಿಲ್ಲದಿದ್ದರೂ ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆಗೆ ಕಾರಣವಾಗುವ ಸಾಧ್ಯತೆ ಇದೆ. 
ಇದೇ ಸಮಯದಲ್ಲಿ ಗುಜರಾತ್ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...