Advertise

11 August 2022

12.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

12.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಗುಜರಾತ್ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶದಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು.

 ಆದರೆ ಇಲ್ಲಿ ಗಾಳಿಯು ಮಹತ್ವದ ಪಾತ್ರ ವಹಿಸುತ್ತಿದೆ. ಬೆಳಿಗ್ಗಿನ ಹೊತ್ತು ಗಾಳಿ ಕಡಿಮೆ ಇರುವುದರಿಂದ ಅಲ್ಲಲ್ಲಿ ಮಳೆ ಬೀಳುತ್ತಿದ್ದು ಆಮೇಲೆ ಬೀಸುವ ಗಾಳಿಯಿಂದ ಮೋಡಗಳು ಮುಂದೆ ಚಲಿಸಿ ಮಲೆನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ. 

ಈ ಕಾರಣದಿಂದ ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಇದೆ ಸಹ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ಆಗಷ್ಟ್ 13ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿವೆ. ಪರಿಣಾಮಗಳು ಇನ್ನಷ್ಟೇ ತಿಳಿಯಬೇಕಾಗಿದೆ. 
ಆಗಷ್ಟ್ 15ರ ನಂತರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 



No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...