Advertise

12 August 2022

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣದ ಮುನ್ಸೂಚನೆ ಇದೆ. ಆಗಷ್ಟ್ 13ರ ನಂತರ ಅಡಿಕೆ ತೋಟಗಳಿಗೆ ಇಡೀ ದಿನ ಔಷಧ ಸಿಂಪರಣೆಗೆ ಅವಕಾಶ ಸಿಗಬಹುದು. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಒಂದೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ರಭಸ ಕಡಿಮೆಯಾದರೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. 
ಈಗನ ಪ್ರಕಾರ ಆಗಷ್ಟ್ 17ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಗುಜರಾತ್ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಪಶ್ಚಿಮ-ಉತ್ತರಕ್ಕೆ ಚಲಿಸಿ ಪಾಕಿಸ್ತಾನಕ್ಕೆ ಅಪ್ಪಳುವ ಲಕ್ಷಣಗಳಿವೆ. 
ಆಗಷ್ಟ್ 13ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪರಿಣಾಮ ತಿಳಿಯಬೇಕಾಗಿದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...