Advertise

13 August 2022

14.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


14.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಆಗಷ್ಟ್ 14ರಿಂದ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಉತ್ತಮ ವಾತಾವರಣ ನಿರ್ಮಾಣವಾಗುವ ಲಕ್ಷಣಗಳಿವೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲೂ ಬಿಸಿಲು, ಮೋಡ, ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಷ್ಟ್ 14ರಂದು ಪಶ್ಚಿಮ ಬಂಗಾಳ ಹಾಗೂ ಒಡಿಶಾದ ಗಡಿಭಾಗಗಳ ಮೂಲಕ ಭೂಮಿಗೆ ಪ್ರವೇಶಿಸುವ ಸಾಧ್ಯತೆ ಇದೆ. ಅಷ್ಟೇನು ಪ್ರಭಲವಲ್ಲದ ವಾಯುಭಾರ ಕುಸಿತವು ಶಿಥಿಲಗೊಳ್ಳದೆ ಮಧ್ಯಪ್ರದೇಶ, ರಾಜಸ್ಥಾನದವರೆಗೂ ಪಯಣಿಸುವ ಲಕ್ಷಣಗಳಿವೆ. 

ಗುಜರಾತ್ ವಾಯುಭಾರ ಕುಸಿತವು ಪಾಕಿಸ್ಥಾನದ ಕರಾಚಿಗೆ ಇವತ್ತು, ನಾಳೆಯಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. 
ರಾಜ್ಯದಾದ್ಯಂತ ಆಗಷ್ಟ್ಮ 14ರಿಂದ ಮಳೆಯ ಪ್ರಮಾಣ ಕಡಿಮೆ ಆಗಲಿದ್ದು 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...