Advertise

14 August 2022

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಬಿಸಿಲು ಹಾಗೂ ಘಟ್ಟದ ತಪ್ಪಲ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಒಡಿಶಾದ ಕರಾವಳಿಯಾದ್ಯಂತ ಅನಿರೀಕ್ಷಿತವಾಗಿ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾಗಿರುವುದರಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗನ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯ ವಾತಾವರಣಕ್ಕೂ ಇದೇ ಕಾರಣ. 
ಪಶ್ಚಿಮ ಬಂಗಾಳ ವಾಯುಭಾರ ಕುಸಿತ ಆಗಷ್ಟ್ 16ರಂದು ರಾಜಸ್ಥಾನ ತಲುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...