Advertise

16 August 2022

17.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 

ಗುಂಡ್ಲುಪೇಟೆ, ಉತ್ತರ ಕನ್ನಡ-ಗೋವಾ ಗಡಿಭಾಗಗಳಲ್ಲಿ, ವಿಜಯಪುರ -  ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಆಗಷ್ಟ್ 17ರಿಂದ ಬೆಂಗಳೂರು, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ಎರಡು ದಿನಗಳಲ್ಲಿ ಅದೂ ಕಡಿಮೆಯಾಗವ ಲಕ್ಷಣಗಳಿವೆ. 
ಈಗಿನಂತೆ ಆಗಷ್ಟ್ 20ರಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿಯಾದ್ಯಂತ ಮತ್ತೆ ಮಳೆಯ ವಾತಾವರಣದ ಸಾಧ್ಯತೆ ಇದ್ದು ಮತ್ತೆರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಭಾಗಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

No comments:

Post a Comment

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ...