Advertise

17 August 2022

18.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
 
ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಧ್ಯಾಹ್ನ ಮೇಲೆ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ ಜಿಲ್ಲಾ ಭಾಗಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಆರಂಭವಾಗಿದ್ದ ವಾಯುಭಾರ ಕುಸಿತವು ಭೂಮಿಯ ಮೇಲೆ ಚಲಿಸಿ ಈಗ ರಾಜಸ್ಥಾನ, ಗುಜರಾತ್ - ಪಾಕಿಸ್ತಾನ ಗಡಿವರೆಗೆ ತಲುಪಿದೆ. ಮುಂದೆ ಪಾಕಿಸ್ತಾನಕ್ಕೆ ಪ್ರವೇಶಿಸಲಿದೆ. 

ಈಗನ ಮುನ್ಸೂಚನೆಯಂತೆ ಆಗಷ್ಟ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ( ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,  ಚಾಮರಾಜನಗರ)  ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಆಗಷ್ಟ್ 20ರಿಂದ ಕರ್ನಾಟಕದ ಕರಾವಳಿಯಾದ್ಯಂತ ಮುಂಗಾರು ಮತ್ತೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 25ರಿಂದ ರಾಜ್ಯದ ದಕ್ಷಿಣದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...