Advertise

20 August 2022

21.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ  ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಮತ್ತು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ಬೆಂಗಳೂರಿನ ಪೂರ್ವ ಭಾಗ ಮತ್ತು ಕೋಲಾರ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಹಾಗೂ ಛತ್ತೀಸಘಡ ಗಡಿಭಾಗಕ್ಕೆ ತಲುಪಿದ್ದು ಇವತ್ತು, ನಾಳೆಯಲ್ಲಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ ಇದೆ. 
ಈಗನ ಪರಿಸ್ಥಿತಿಯಂತೆ ಆಗಷ್ಟ್ 21ರಿಂದ ಕರಾವಳಿ ಭಾಗಗಳಲ್ಲಿ ಮತ್ತು 26ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...