Advertise

21 August 2022

22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ ಸ್ವಲ್ಪ ಮಳೆ ಕಡಿಮೆ ಇದ್ದರೆ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

 ತುಮಕೂರು, ಚಿತ್ರದುರ್ಗ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉತ್ತರ ಭಾರತದಲ್ಲಿ ಉಂಟಾಗಿರುವ 2 ವಾಯುಭಾರ ಕುಸಿತವು ಬಹಳಷ್ಟು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಮಧ್ಯ ಭಾರತದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. 

ಆಗಷ್ಟ್ 22 ರಿಂದ 24ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. 
25ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಸಾಧಾರಣ ಮಳೆಯ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...