Advertise

24 August 2022

25.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


25.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ,  ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಆಗಷ್ಟ್ 25ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು 
ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮತ್ತು ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 


1 comment:

  1. ಇನ್ನೀಗ ಕರಾವಳಿ ಭಾಗದ ಕೃಷಿಕರು,
    ತರಕಾರಿ ಬೀಜ ಹಾಕುವುದು / ನೆಡುವುದು ಮಾಡಬಹುದುದಾದರೂ,
    ಉತ್ತಮ ಬಸಿಗಾಲುವೆ
    (ಸುಮಾರು ಅರ್ಧ ಅಡಿ ಆಳ, ಮುಕ್ಕಾಲು ಅಡಿ ಅಗಲದ) ಇಟ್ಟುಕೊಳ್ಳುವುದು ಒಳ್ಳೆಯದು ಅನಿಸುತ್ತದೆ.

    ReplyDelete

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...