Advertise

25 August 2022

26.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆ ಕಡಿಮೆಯಾಗಿ ಮೋಡದ ವಾತಾವರಣದ ಇದೆ. ಆದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ಮೇಲೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. 
ಬಂಗಾಳಕೊಲ್ಲಿ ಶಾಂತವಾಗಿರುವುದರಿಂದ ಸಧ್ಯಕ್ಕೆ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕಾರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಸೆಪ್ಟೆಂಬರ್ 1ರ ವರೆಗೆ ಅಲ್ಲಲ್ಲಿ ದಿನಕ್ಕೆ ಒಂದೆರಡು ಮಳೆಯಂತೆ ಮುಂದುವರಿಯುವ ಮುನ್ಸೂಚನೆ ಇದೆ. 
ಆಮೇಲೆ ಮತ್ತೂ ಕಡಿಮೆಯಾಗಬಹುದು. 

ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...