Advertise

26 August 2022

27.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27. 08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 
ಉತ್ತರ ಕನ್ನಡ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. 

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಆಗಷ್ಟ್ 27ರಿಂದ ಮಳೆ ಸ್ವಲ್ಪ ಕಡಿಮೆ ಆಗಬಹುದು. ಆಗಷ್ಟ್ 30ರಿಂದ ಮತ್ತೆ ಬಿರುಸುಗೊಳ್ಳುವ ಮಳೆಯು ಸೆಪ್ಟೆಂಬರ್ 6 ಅಥವಾ 7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...