Advertise

27 August 2022

28.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಉಳಿದ ದ. ಕ. ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ ಭಾರಿ ಮಳೆಯ ಮುನ್ಸೂಚನೆ ಇದೆ. 
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ ಬಾಗಲಕೋಟೆ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ಇವತ್ತು ಹಾಗೂ ನಾಳೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಆಗಷ್ಟ್ 29 ರಿಂದ ಸೆಪ್ಟೆಂಬರ್ 3ರ ತನಕ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...