Advertise

30 September 2022

01.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

01.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತಮ, ಉಡುಪಿ ಹಾಗೂ ದಕ್ಷಿಣ ಕನ್ನಡ ಸ್ವಲ್ಪ ಕಡಿಮೆಯಾದರೂ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಸುಳ್ಯ, ಕಡಬ, ಉಪ್ಪಿನಂಗಡಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಒತ್ತಡ ಕಡಿಮೆ ಇದ್ದರೂ ದಿಕ್ಕು ಬದಲಿಸಿ ಪಶ್ಚಿಮದಿಂದ ಪೂರ್ವಕ್ಕೆ ಚಲಿಸಲು ಆರಂಭವಾಗಿದೆ. ಈಗನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ .

29 September 2022

30.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

30.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉಡುಪಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೋಲಾರ, ಪಾವಗಡ, ಬಳ್ಳಾರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಒತ್ತಡ ಕಡಿಮೆ ಇದ್ದು, ಉತ್ತರದಿಂದ ದಕ್ಷಿಣದ ಕಡೆಗೆ ಚಲಿಸುತ್ತಿದೆ. ಈ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. 
ಈಗನ ಮುನ್ಸೂಚನೆಯಂತೆ ನಾಳೆಯಿಂದ ಕರಾವಳಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


28 September 2022

29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ವೇಳೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬಿಸಿಲು ಹಾಗೂ ಮೋಡದ ವಾತಾವರಣ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉತ್ತರ ಕರ್ನಾಟಕದ ಭಾಗಗಳಲ್ಲಿ ಸೆಪ್ಟೆಂಬರ್ 30ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 
ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆ ಇದ್ದರೆ ಒಕ್ಟೊಬರ್ 2 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ. 



27 September 2022

28.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

28.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಸಹ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಗಾಳಿಯ ಒತ್ತಡ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 
ಸೆಪ್ಟೆಂಬರ್ 30ರ ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 




26 September 2022

27.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ:

27.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರದಿಂದ ದಕ್ಷಿಣ ಪೂರ್ವ ಭಾಗಕ್ಕೆ ಗಾಳಿಯ ಬೀಸುವಿಕೆಯಿಂದ ( ಗಾಳಿಯ ಒತ್ತಡ) ಮತ್ತು ಒಡಿಶಾ ಕರಾವಳಿ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು. ರಾತ್ರಿಯ ವೇಳೆ ಅಲ್ಲಿಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


25 September 2022

26.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

26.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಕೊಡಗು, ಪಾವಗಡ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ವೇಳೆಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ದಾವಣಗೆರೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ನಿಧಾನವಾಗಿದೆ ಹಾಗೂ ಗಾಳಿಯ ಒತ್ತಡ ಕಡಿಮೆ ಇರುವುದರಿಂದ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.

24 September 2022

25.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

25.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಚಿತ್ರದುರ್ಗ ಭಾಗಗಳಲ್ಲಿ ಸಹ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ಸಂಜೆಯ ವೇಳೆಗೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ನಿಧಾನ ಗತಿಯಲ್ಲದೆ.    ಇನ್ನೆರಡು ದಿನಗಳಲ್ಲಿ ಈ ವಾತಾವರಣವು ಬಿಸಿಲು ಹಾಗೂ ಒಣ ಹವೆಯ ರೂಪಕ್ಕೆ ಬದಲಾಗಬಹುದು. 

23 September 2022

24.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

24.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದೆಹಲಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ತಲುಪಿದ್ದು ಹರಿಯಾಣ, ದೆಹಲಿ, ಜೈಪುರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ 
ಗಾಳಿಯ ಒತ್ತಡ ಕಡಿಮೆಯಾದುದರಿಂದ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ನಿರೀಕ್ಷೆಗಳಿಲ್ಲ. 
ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ತನಕ ಮಳೆ ವ್ಯಾಪಿಸುವ ಸಾಧ್ಯತೆ ಇದೆ. ಮತ್ತೆರಡು ದಿನಗಳಲ್ಲಿ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 



21 September 2022

22.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

22.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಉತ್ತರ ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, 
ದಕ್ಷಿಣ ಕರ್ನಾಟಕದ ಭಾಗಗಳಲ್ಲಿ 28ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು ಅಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 

20 September 2022

21.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

21.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 


ಈಗನ ಮುನ್ಸೂಚನೆಯಂತೆ ಮುಂದಿನ ಒಂದು ವಾರದ ಮಟ್ಟಿಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದರೂದ ಮುನ್ಸೂಚನೆ ಇದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಭೂ ಭಾಗದಲ್ಲಿ ಪ್ರವೇಶಿಸಿರುವುದರಿಂದ ಇನ್ನು ದುರ್ಬಲಗೊಳ್ಳುವ ಲಕ್ಷಣಗಳಿವೆ. 


19 September 2022

20.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

20.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮುಂಗಾರನ್ನು ಹಿಡಿದಿಟ್ಟುಕೊಂಡಿದ್ದರಿಂದ ಕಾಸರಗೋಡು ಸೇರಿದಂತೆ ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. 

ಕೊಡಗು, ಚಿಕ್ಕಮಗಳೂರು ಸಹ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಒಡಿಶಾದ ಕರಾವಳಿಯ ಮೂಲಕ ಭೂ ಪ್ರವೇಶಿಸುವ ಮುನ್ಸೂಚನೆ ಇದೆ. 
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಇನ್ನೆರಡು ದಿನ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದೆ 



18 September 2022

19.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

19.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಇನ್ನೂ ಒಂದೆರಡು ದಿನ ಮೋಡ ವಾತಾವರಣ ಇರಬಹುದು. 
ಕರಾವಳಿ ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡದ ವಾತಾವರಣ ಜೊತೆಗೆ ಒಂದೆರಡು ತುಂತುರು ಮಳೆ ಮುಂದುವರಿಯುವ ಲಕ್ಷಣಗಳಿವೆ. 

17 September 2022

18.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

18.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 19ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದರೂ ಕರಾವಳಿ ಭಾಗಗಳಲ್ಲಿ ಆಗಾಗ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ. 

16 September 2022

17.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ


17.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಇದ್ದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಇರಲಿದ್ದು, ಸಂಜೆ ಮೋಡ 
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು, ಲಕ್ನೋ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಇನ್ನು ವಾಯುನಿಮ್ನತೆಯು ಮುಂಬೈ ತಲುಪಿದ್ದು, ಮುಂಬೈ ಸುತ್ತಮುತ್ತ ಉತ್ತಮ ಮಳೆಯ ಸಾಧ್ಯತೆ ಇದೆ.

ಈಗನ ಮುನ್ಸೂಚನೆಯಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸಲಿದೆ.

ಇನ್ನೆರಡು ದಿನಗಳಲ್ಲಿ ಮುಂಗಾರು ಹಿಂದೆ ಸರಿಯಲು ಆರಂಭವಾಗುವ ಸಾಧ್ಯತೆ ಇದೆ


15 September 2022

16.9.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

16.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಇದ್ದು ಆಗಾಗ ಮೋಡ ಮತ್ತು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಇನ್ನೆರಡು ದಿನಗಳಲ್ಲಿ ಕರಾವಳಿಯಲ್ಲಿ ಸಹ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ. 

ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ  ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.

 ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 18ರಿಂದ ದಕ್ಷಿಣ ಒಳನಾಡು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 




14 September 2022

15.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

15.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಬಳ್ಳಾಪುರ, ತುಮಕೂರು, ಕಲಬುರ್ಗಿ, ಬೀದರ್  ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ ಸೆ. 16ರಂದು ಮಳೆ ತುಂಬಾ ಕಡಿಮೆ ಇರಲಿದ್ದು ಆಮೇಲಿನ ದಿನಗಳಲ್ಲಿ ಅಲ್ಲಲ್ಲಿ ದಿನಾ ಒಂದೆರಡು ಮಳೆಯ ಬೀಳುವ ಸಾಧ್ಯತೆ ಇದೆ. 
ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದರೆ, ಗುಜರಾತ್ ನಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ಉಂಟಾಗಿದೆ. ಇದರಿಂದ ಮೋಡಗಳು ಉತ್ತರಕ್ಕೆ ಸೆಳೆಯುತ್ತಿವೆ. 




13 September 2022

14.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

14.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ, ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಉಡುಪಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೋಲಾರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು  ಮೋಡ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯು ಕೋಲಾರ ಭಾಗದಿಂದ ಇವತ್ತು ನಾಳೆಯಲ್ಲಿ ಆರಂಭವಾಗುವ ಲಕ್ಷಣಗಳಿವೆ 


12 September 2022

13.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

13.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯಿಂದ ಹೊನ್ನಾವರ ಕಡಲ ತೀರದ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ. 

ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡ, ಬಿಸಿಲು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈ ವಾತಾವರಣವು ಕರಾವಳಿ ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮುಂದುವರಿಯುವ ಲಕ್ಷಣಗಳಿವೆ. 
ಅರಬ್ಬಿ ಸಮುದ್ರದ ಮುಂಬೈ ತೀರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುತ್ತಾ ಪಶ್ಚಿಮದ ಕಡೆ ಚಲಿಸುವ ಸಾಧ್ಯತೆ ಇದೆ. 


11 September 2022

12.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

12.9.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯು ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಹಾವೇರಿ ಆಗಾಗ ಸಾಮಾನ್ಯ ಮಳೆ ಇದ್ದರೆ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಇನ್ನೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 
ಜೊತೆಗೆ ಸಂಜೆಯ ಹೊತ್ತಿಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಯೂ ಇದೆ. 
ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸೆಪ್ಟೆಂಬರ್ 18ರ ತನಕ ಈಗಿನ ವಾತಾವರಣವು ಮುಂದುವರಿಯುವ ಸಾಧ್ಯತೆ ಇದೆ 


10 September 2022

11.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ವಾತಾವರಣ ಹೇಗಿರುತ್ತೆ

11.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯು ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹಾಗೂ ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು ಉತ್ತರ ಒಳನಾಡು ಭಾಗಗಳಲ್ಲಿ  ಸೆ. 13ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ. 
ಆದರೆ ಕರಾವಳಿ ಭಾಗಗಳಲ್ಲಿ ಸೆ. 18ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ 




09 September 2022

10.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.09.2022 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಡುಪಿ, ಭಟ್ಕಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಚಾಮರಾಜನಗರದ ಒಂದೆರಡು ಕಡೆ, ಬೆಂಗಳೂರು ಪೂರ್ವ ಭಾಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಬಳ್ಳಾರಿ, ಗದಗ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಈ ವಾತಾವರಣವು ದಕ್ಷಿಣ ಒಳನಾಡು ಭಾಗಗಳಲ್ಲಿ ಇವತ್ತು ಕೊನೆಗೊಳ್ಳುವ ಲಕ್ಷಣಗಳಿದ್ದು, ನಾಳೆಯಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉತ್ತರ ಒಳನಾಡು ಭಾಗಗಳಲ್ಲಿ ಸೆ. 11ರಿಂದ ಮಳೆ ಕಡಿಮೆಯಾಗುವ ಸೂಚನೆ ಇದೆ. 
ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯು ಸೆ. 18ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ. 
ಮಲೆನಾಡು ಭಾಗಗಳಲ್ಲಿ ಕರಾವಳಿಯ ಮಳೆಯ ಪ್ರಭಾವದಿಂದ 18ರ ವರೆಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


08 September 2022

09.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.  
ಪಡುಬಿದ್ರಿ, ಕಾರ್ಕಳ, ಕುದುರೆಮುಖ, ಶಿೃಂಗೇರಿ, ಹೊರನಾಡು, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 
ವಾಯುಭಾರ ಕುಸಿತವು ಉತ್ತರ ಕನ್ನಡ ಕರಾವಳಿ ತೀರದ ಸಮೀಪ ಇರುವುದರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ನಿರಂತರ ಮಳೆ ಸಾಧ್ಯತೆ ಇದೆ.

ಕೊಡಗು ಸಾಮಾನ್ಯವಾಗಿದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಗದಗ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಯಚೂರು, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಚಾಮರಾಜನಗರದ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಿನ ಈ ಮಳೆಯು  ಸೆ. 9 ರ ನಂತರ ಕಡಿಮೆಯಾಗಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಸೆ. 11ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ.
ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸೆ. 17ರ ತನಕವೂ ಮಳೆಯ ಮುನ್ಸೂಚನೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...