Advertise

30 September 2022

01.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

01.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತಮ, ಉಡುಪಿ ಹಾಗೂ ದಕ್ಷಿಣ ಕನ್ನಡ ಸ್ವಲ್ಪ ಕಡಿಮೆಯಾದರೂ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಸುಳ್ಯ, ಕಡಬ, ಉಪ್ಪಿನಂಗಡಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಒತ್ತಡ ಕಡಿಮೆ ಇದ್ದರೂ ದಿಕ್ಕು ಬದಲಿಸಿ ಪಶ್ಚಿಮದಿಂದ ಪೂರ್ವಕ್ಕೆ ಚಲಿಸಲು ಆರಂಭವಾಗಿದೆ. ಈಗನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ .

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...