Advertise

03 September 2022

04.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಸಂಜೆ ಕೊಡಗು ಗುಡುಗು ಸಹಿತ ಸಾಮಾನ್ಯವಾಗಿದ್ದರೆ, ಆಗುಂಬೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡದಲ್ಲಿ ಸುಳ್ಯ, ಪುತ್ತೂರು ಸಂಜೆ ಗುಡುಗು ಸಹಿತ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆ ಇದ್ದರೆ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಮೋಡ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಉಂಟಾಗಿರುವ ವಾಯುನಿಮ್ನತೆ ರೀತಿಯ ವಾತಾವರಣವು ಇವತ್ತು ಸಂಜೆ ಕೊನೆಕೊಳ್ಳುವ ಲಕ್ಷಣಗಳಿವೆ. 
ಸೆಪ್ಟೆಂಬರ್ 4ರಿಂದ 9ರ ತನಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಚುರುಕಾಗುವ ಮುನ್ಸೂಚನೆ ಇದೆ. 
ಸೆಪ್ಟೆಂಬರ್ 5 ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ (ಮುಂಗಾರು ರೀತಿಯ) ಸಹ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. 

No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...