06.05.2022ರರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಗುಂಬೆ ಸುತ್ತಮುತ್ತ ಮಳೆ ಹೆಚ್ಚಿರುವುದರಿಂದ ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಉಡುಪಿ ಹಾಗೂ ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು ಸಾಮಾನ್ಯವಾಗಿದ್ದರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಿಜಯಪುರ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ
ಈಗನ ಮುನ್ಸೂಚನೆಯಂತೆ ಕೇರಳದ ದಕ್ಷಿಣ ಭಾಗದ ಕಡಲ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಆದೆ. ಪರಿಣಾಮವಾಗಿ ಇನ್ನೊಂದು ದಿನದಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ.
ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಹಾಗೂ ಕೇರಳದಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಹೊರತುಪಡಿಸಿ ರಾಜ್ಯದಾದ್ಯಂತ ಸೆಪ್ಟೆಂಬರ್ 10ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
No comments:
Post a Comment