07 September 2022

08.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾದ್ಯಂತ ಮಧ್ಯಾಹ್ನ ಮೇಲೆ ಭಾರಿ ಮಳೆಯ ಮುನ್ಸೂಚನೆ ಇದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಸಹ ಭಾರಿ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರಿನ ಆಗುಂಬೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಉತ್ತಮ ಮಳೆಯಾದರೆ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ, ರಾಯಚೂರು ಹಾಗೂ ಬಳ್ಳಾರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತವು ಇನ್ನಷ್ಟು ಬಲಗೊಂಡು ಈಗಿನ ಪ್ರಕಾರ ಸೆಪ್ಟೆಂಬರ್ 9ರಂದು ಆಂದ್ರಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನಷ್ಟು ಉತ್ತರಕ್ಕೆ ಚಲಿಸಿ ಸೆಪ್ಟೆಂಬರ್ 11ರಂದು ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಈಗನ ಪ್ರಕಾರ ಸೆಪ್ಟೆಂಬರ್ರಾ 9ರ ನಂತರ ಕರಾವಳಿ ಹೊರತುಪಡಿಸಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.

No comments:

Post a Comment