Advertise

08 September 2022

09.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.  
ಪಡುಬಿದ್ರಿ, ಕಾರ್ಕಳ, ಕುದುರೆಮುಖ, ಶಿೃಂಗೇರಿ, ಹೊರನಾಡು, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 
ವಾಯುಭಾರ ಕುಸಿತವು ಉತ್ತರ ಕನ್ನಡ ಕರಾವಳಿ ತೀರದ ಸಮೀಪ ಇರುವುದರಿಂದ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ನಿರಂತರ ಮಳೆ ಸಾಧ್ಯತೆ ಇದೆ.

ಕೊಡಗು ಸಾಮಾನ್ಯವಾಗಿದ್ದರೆ, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಗದಗ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಯಚೂರು, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಚಾಮರಾಜನಗರದ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಿನ ಈ ಮಳೆಯು  ಸೆ. 9 ರ ನಂತರ ಕಡಿಮೆಯಾಗಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಸೆ. 11ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ.
ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸೆ. 17ರ ತನಕವೂ ಮಳೆಯ ಮುನ್ಸೂಚನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...