Advertise

11 September 2022

12.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

12.9.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯು ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಹಾವೇರಿ ಆಗಾಗ ಸಾಮಾನ್ಯ ಮಳೆ ಇದ್ದರೆ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಇನ್ನೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 
ಜೊತೆಗೆ ಸಂಜೆಯ ಹೊತ್ತಿಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಯೂ ಇದೆ. 
ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸೆಪ್ಟೆಂಬರ್ 18ರ ತನಕ ಈಗಿನ ವಾತಾವರಣವು ಮುಂದುವರಿಯುವ ಸಾಧ್ಯತೆ ಇದೆ 


No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...