13 September 2022

14.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

14.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ, ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಉಡುಪಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೋಲಾರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು  ಮೋಡ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯು ಕೋಲಾರ ಭಾಗದಿಂದ ಇವತ್ತು ನಾಳೆಯಲ್ಲಿ ಆರಂಭವಾಗುವ ಲಕ್ಷಣಗಳಿವೆ 


No comments:

Post a Comment