Advertise

14 September 2022

15.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

15.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಬಳ್ಳಾಪುರ, ತುಮಕೂರು, ಕಲಬುರ್ಗಿ, ಬೀದರ್  ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ ಸೆ. 16ರಂದು ಮಳೆ ತುಂಬಾ ಕಡಿಮೆ ಇರಲಿದ್ದು ಆಮೇಲಿನ ದಿನಗಳಲ್ಲಿ ಅಲ್ಲಲ್ಲಿ ದಿನಾ ಒಂದೆರಡು ಮಳೆಯ ಬೀಳುವ ಸಾಧ್ಯತೆ ಇದೆ. 
ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದರೆ, ಗುಜರಾತ್ ನಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ಉಂಟಾಗಿದೆ. ಇದರಿಂದ ಮೋಡಗಳು ಉತ್ತರಕ್ಕೆ ಸೆಳೆಯುತ್ತಿವೆ. 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...