Advertise

15 September 2022

16.9.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

16.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಇದ್ದು ಆಗಾಗ ಮೋಡ ಮತ್ತು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಇನ್ನೆರಡು ದಿನಗಳಲ್ಲಿ ಕರಾವಳಿಯಲ್ಲಿ ಸಹ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ. 

ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ  ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.

 ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 18ರಿಂದ ದಕ್ಷಿಣ ಒಳನಾಡು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...