Advertise

16 September 2022

17.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ


17.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಇದ್ದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಇರಲಿದ್ದು, ಸಂಜೆ ಮೋಡ 
ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು, ಲಕ್ನೋ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಇನ್ನು ವಾಯುನಿಮ್ನತೆಯು ಮುಂಬೈ ತಲುಪಿದ್ದು, ಮುಂಬೈ ಸುತ್ತಮುತ್ತ ಉತ್ತಮ ಮಳೆಯ ಸಾಧ್ಯತೆ ಇದೆ.

ಈಗನ ಮುನ್ಸೂಚನೆಯಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸಲಿದೆ.

ಇನ್ನೆರಡು ದಿನಗಳಲ್ಲಿ ಮುಂಗಾರು ಹಿಂದೆ ಸರಿಯಲು ಆರಂಭವಾಗುವ ಸಾಧ್ಯತೆ ಇದೆ


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...