Advertise

18 September 2022

19.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

19.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಮೋಡ ಅಥವಾ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಇನ್ನೂ ಒಂದೆರಡು ದಿನ ಮೋಡ ವಾತಾವರಣ ಇರಬಹುದು. 
ಕರಾವಳಿ ಭಾಗಗಳಲ್ಲಿ ಇನ್ನೂ ಒಂದು ವಾರದ ಕಾಲ ಮೋಡದ ವಾತಾವರಣ ಜೊತೆಗೆ ಒಂದೆರಡು ತುಂತುರು ಮಳೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...