Advertise

19 September 2022

20.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

20.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮುಂಗಾರನ್ನು ಹಿಡಿದಿಟ್ಟುಕೊಂಡಿದ್ದರಿಂದ ಕಾಸರಗೋಡು ಸೇರಿದಂತೆ ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. 

ಕೊಡಗು, ಚಿಕ್ಕಮಗಳೂರು ಸಹ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಒಡಿಶಾದ ಕರಾವಳಿಯ ಮೂಲಕ ಭೂ ಪ್ರವೇಶಿಸುವ ಮುನ್ಸೂಚನೆ ಇದೆ. 
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಇನ್ನೆರಡು ದಿನ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದೆ 



No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...