Advertise

23 September 2022

24.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

24.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದೆಹಲಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ತಲುಪಿದ್ದು ಹರಿಯಾಣ, ದೆಹಲಿ, ಜೈಪುರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ 
ಗಾಳಿಯ ಒತ್ತಡ ಕಡಿಮೆಯಾದುದರಿಂದ ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ನಿರೀಕ್ಷೆಗಳಿಲ್ಲ. 
ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ತನಕ ಮಳೆ ವ್ಯಾಪಿಸುವ ಸಾಧ್ಯತೆ ಇದೆ. ಮತ್ತೆರಡು ದಿನಗಳಲ್ಲಿ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 



No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...