Advertise

26 September 2022

27.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ:

27.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರದಿಂದ ದಕ್ಷಿಣ ಪೂರ್ವ ಭಾಗಕ್ಕೆ ಗಾಳಿಯ ಬೀಸುವಿಕೆಯಿಂದ ( ಗಾಳಿಯ ಒತ್ತಡ) ಮತ್ತು ಒಡಿಶಾ ಕರಾವಳಿ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು. ರಾತ್ರಿಯ ವೇಳೆ ಅಲ್ಲಿಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...