Advertise

27 September 2022

28.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

28.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಸಹ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಗಾಳಿಯ ಒತ್ತಡ ಕಡಿಮೆ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 
ಸೆಪ್ಟೆಂಬರ್ 30ರ ನಂತರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 




No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...