Advertise

28 September 2022

29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ವೇಳೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬಿಸಿಲು ಹಾಗೂ ಮೋಡದ ವಾತಾವರಣ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉತ್ತರ ಕರ್ನಾಟಕದ ಭಾಗಗಳಲ್ಲಿ ಸೆಪ್ಟೆಂಬರ್ 30ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 
ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆ ಇದ್ದರೆ ಒಕ್ಟೊಬರ್ 2 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...