Advertise

29 September 2022

30.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

30.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉಡುಪಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೋಲಾರ, ಪಾವಗಡ, ಬಳ್ಳಾರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಒತ್ತಡ ಕಡಿಮೆ ಇದ್ದು, ಉತ್ತರದಿಂದ ದಕ್ಷಿಣದ ಕಡೆಗೆ ಚಲಿಸುತ್ತಿದೆ. ಈ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. 
ಈಗನ ಮುನ್ಸೂಚನೆಯಂತೆ ನಾಳೆಯಿಂದ ಕರಾವಳಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...