Advertise

04 October 2022

05.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

05.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡದ ಕರಾವಳಿ ಭಾಗಗಳಲ್ಲಿ, ಬಂಟ್ವಾಳ, ಪುತ್ತೂರು, ಕಾಸರಗೋಡು, ಮೂಡುಬಿದಿರೆ ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಕಡಿಮೆ ಸ್ವಲ್ಪ ಕಡಿಮೆ ಇರಬಹುದು. 

ಕೊಡಗು, ಸಕಲೇಶಪುರ, ಮೂಡಿಗೆರೆ, ಚಾರ್ಮಾಡಿ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಸುಮಾರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ವಾಯುಭಾರ ಕುಸಿತವು ಶಿಥಿಲಗೊಂಡಿದ್ದರಿಂದ ರಾಜ್ಯದಾದ್ಯಂತ ಒಕ್ಟೊಬರ್ 7ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. 8ನೇ ತಾರೀಕಿನಿಂದ ಮತ್ತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗಿ ಮಳೆ ಹೆಚ್ಚಾಗುವ ಸೂಚನೆಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...