Advertise

05 October 2022

06.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

06.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಬಹಳ ಸೀಮಿತ ಒಂದೆರಡು ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಜಿಲ್ಲೆಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಲಿದ್ದು ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 


ಈಗನ ಮುನ್ಸೂಚನೆಯಂತೆ ಒಕ್ಟೊಬರ್ 6 ಅಥವಾ 7 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಕರ್ನಾಟಕದ ಉತ್ತರ ಭಾಗಗಳಲ್ಲಿ ಉತ್ತಮ ಮಳೆಯ ಲಕ್ಷಣಗಳಿವೆ. ಕ್ರಮೇಣ ಒಕ್ಟೊಬರ್ 9 ರಿಂದ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 



No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...