Advertise

06 October 2022

07.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ?

07.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಾಗಲೇ ಅಲ್ಲಲ್ಲಿ ಮಳೆಯಾಗುತ್ತಿದೆ. ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಮಳೆ ಪ್ರಮಾಣ ಹೆಚ್ಚಿರಬಹುದು. 

ಶಿವಮೊಗ್ಗ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರೆ, ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ಪಾವಗಡ, ಬಳ್ಳಾರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಾಗಲೇ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದೆ . 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸಂಪೂರ್ಣ ಶಿಥಿಲಗೊಳ್ಳದೆ ಆಂದ್ರಾದ ಒಂಗೊಲ್, ನೆಲ್ಲೂರು ಹಾಗೂ ಕಾಕಿನಾಡ ಭಾಗದಲ್ಲಿ ಭೂಮಿಯಲ್ಲಿ ತಿರುಗುತ್ತಿರುವುದರಿಂದ ಈ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಈ ವಾತಾವರಣವು ಇವತ್ತು ಹಾಗೂ ನಾಳೆಯ ತನಕ ಮುಂದುವರಿಯುವ ಸಾಧ್ಯತೆ ಇದೆ. ಆಮೇಲೆ ಮಳೆ ಕಡಿಮೆಯಾಗಬಹುದು. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...