Advertise

07 October 2022

08.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

08.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ವಿಜಯಪುರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಬೆಂಗಳೂರು, ಬಾಗಲಕೋಟೆ, ಬಳ್ಳಾರಿ ರಾಯಚೂರು, ಚಿತ್ರದುರ್ಗ( ಒಂದೆರಡು ಕಡೆ), ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗನ ವಾಯುಭಾರ ಕುಸಿತ ಮಹಾರಾಷ್ಟ್ರ ತಲುಪಿದ್ದು, ನಾಳೆ ಗುಜರಾತ್ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪದ ಸಮೀಪ ವಾಯುನಿಮ್ನತೆ ಉಂಟಾಗುವ ಲಕ್ಷಣಗಳಿವೆ. 
ವಾಯುಭಾರ ಕುಸಿತವಾಗಿ ಪರಿವರ್ತನೆಯಾದರೆ ಮತ್ತೆ ಒಕ್ಟೊಬರ್ 9 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 



No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...