Advertise

10 October 2022

11.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

11.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಅಥವಾ ತುಂತುರು ಮಳೆ ಇರಲಿದ್ದು ಸಂಜೆ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ರಾಜ್ಯದಾದ್ಯಂತ ಹಿಂಗಾರು ಮಳೆ ಪ್ರಾರಂಭವಾಗಿದೆ. 

ಇವತ್ತು ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು. 

ಈಗನ ಈ ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 
ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುತ್ತಿದೆ. 




1 comment:

  1. ಗಾಳಿಯ ಚಲನೆಯನ್ನು ನೋಡಿದರೆ ಮುಂದಿನ ವಾರ/ಈ ವಾರದ ಕಡೆಯ ದಿನಗಳಲ್ಲಿ ಕರಾವಳಿಗೆ ಮಳೆ ನಿರೀಕ್ಷಿತ ✌💕👍🙏🏾👌🏿😃

    ReplyDelete

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...