Advertise

15 October 2022

16.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆ, ದಕ್ಷಿಣ ಕನ್ನಡ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಉತ್ತಮ ಮಳೆಯಾದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರಿನ ಶಿೃಂಗೇರಿ, ತೀರ್ಥಹಳ್ಳಿ, ಆಗುಂಬೆ, ಕುದುರೆಮುಖ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗ, ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಹಾಸನ, ಮಂಡ್ಯ, ತುಮಕೂರು, ಉಳಿದ ಚಿಕ್ಕಮಗಳೂರು, ದಾವಣಗೆರೆ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ರೀತಿಯ ವಾತಾವರಣವು ಉಂಟಾಗಿದ್ದರೂ ಸಮತೋಲನಗೊಂಡು ಅಷ್ಟೇನು ಪರಿಣಾಮ ಬೀರುವ ಲಕ್ಷಣಗಳಿಲ್ಲ. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...