Advertise

17 October 2022

18.10.2022ರ ಬೆಳಿಗ್ಗೆ 8 ಗಂಟೆವರೆಗೆ

18.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಗುಡುಗು ಸಹಿತ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. 
ಉಡುಪಿಯ ಕಾರ್ಕಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಹಾಗೂ ಉತ್ತರ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಭಾರಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ದಾವಣಗೆರೆ, ಹಾವೇರಿ, ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು,  ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಗದಗ, ಬಾಗಲಕೋಟೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಂತ ತಿರುವಿಕೆ ಮತ್ತಷ್ಟು ಪಶ್ಚಿಮಕ್ಕೆ ಚಲಿಸಿದ್ದು, ಇದರಿಂದ ರಾಜ್ಯಕ್ಕೆ ಯಾವುದೇ ಪರಿಣಾಮವಿಲ್ಲ. 
ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಪ್ರಭಲಗೊಳ್ಳುವ ಮುನ್ಸೂಚನೆ ಇದೆ. ಈ ವಾಯುಭಾರ ಕುಸಿತವು ಪ್ರಭಲಗೊಂಡಂತೆ ಹಿಂಗಾರು ಮಾರುತಗಳು ದುರ್ಬಲಗೊಳ್ಳಲಿದೆ. 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...